ರಾಜ್ಯದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಪೋಷಕರ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. 2026ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಯ ದಿನಾಂಕ ಮತ್ತು ಸಮಯವನ್ನು ನಿಗದಿ ಮಾಡಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ (KSEAB) ಈ ಕುರಿತು ಅಧಿಕೃತ ಮಾಹಿತಿ ದೊರೆತಿದೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೂ ಸಹ ಇದನ್ನು ದೃಢಪಡಿಸಿದ್ದಾರೆ. .
ಹಿಂದಿ ವಿಷಯದ ಗ್ರೇಡಿಂಗ್ ಕುರಿತಾಗಿ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ವಿಳಂಬವಾಗಬಹುದು ಎಂಬೆಲ್ಲಾ ಊಹಾಪೋಹಗಳಿಗೆ ಇದೀಗ ಬ್ರೇಕ್ ಬಿದ್ದಿದ್ದು, ನಿಗದಿತ ಸಮಯಕ್ಕೇ ಫಲಿತಾಂಶ ಹೊರಬೀಳುತ್ತಿದೆ.
Karnataka SSLC Result 2026 Date and Time:
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಣೆvnfnu ನಾಳೆ, ಅಂದರೆ ಗುರುವಾರ (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
ಮೊಬೈಲ್‌ಗೇ ಬರಲಿದೆ ರಿಸಲ್ಟ್; ಡಿಜಿಲಾಕರ್‌ನಲ್ಲೂ ಅಂಕಪಟ್ಟಿ ಲಭ್ಯ: ಈ ಬಾರಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಕೆಲವು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. ಫಲಿತಾಂಶ ಪ್ರಕಟವಾದ ತಕ್ಷಣ, ಮಂಡಳಿಯಲ್ಲಿ ನೋಂದಾಯಿಸಿರುವ ಪೋಷಕರ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ (SMS) ಹಾಗೂ ವಾಟ್ಸಾಪ್ (WhatsApp) ಮೂಲಕ ನೇರವಾಗಿ ಫಲಿತಾಂಶವನ್ನು ರವಾನಿಸಲಾಗುತ್ತದೆ.
ಇದರ ಜೊತೆಗೆ, ಈ ವರ್ಷ ಪ್ರಥಮ ಬಾರಿಗೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು (Marks Card) ‘ಡಿಜಿಲಾಕರ್’ (DigiLocker) ತಂತ್ರಾಂಶದಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆಯ ನಂತರ ವಿದ್ಯಾರ್ಥಿಗಳು ವೆಬ್‌ಸೈಟ್ ಅಥವಾ ಆ್ಯಪ್ ಮೂಲಕ ತಮ್ಮ ಡಿಜಿಟಲ್ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ‘ಕರ್ನಾಟಕ ಒನ್’ (KarnatakaOne) ಆ್ಯಪ್ ಮೂಲಕವೂ ಫಲಿತಾಂಶ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಸಚಿವ ಮಧು ಬಂಗಾರಪ್ಪ ಅವರ ಧೈರ್ಯದ ನುಡಿ: “ಫಲಿತಾಂಶ ಪ್ರಕಟಣೆಗೆ ಇಲಾಖೆ ಸರ್ವಸನ್ನದ್ಧವಾಗಿದೆ. ವಿದ್ಯಾರ್ಥಿಗಳು ಫಲಿತಾಂಶದ ಬಗ್ಗೆ ಯಾವುದೇ ಆತಂಕ ಅಥವಾ ಭಯ ಪಡುವ ಅಗತ್ಯವಿಲ್ಲ. ಒಂದು ವೇಳೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅಥವಾ ಅನುತ್ತೀರ್ಣರಾದರೆ ಯಾರೂ ಧೃತಿಗೆಡಬಾರದು.
ರಾಜ್ಯದಲ್ಲಿ ಈಗ ಸುಧಾರಿತ ಪರೀಕ್ಷಾ ಪದ್ಧತಿ ಜಾರಿಯಲ್ಲಿದ್ದು, ಪರೀಕ್ಷೆ-2 ಮತ್ತು ಪರೀಕ್ಷೆ-3ರ ಮೂಲಕ ಮತ್ತೆ ಪರೀಕ್ಷೆ ಬರೆದು ಅಂಕಗಳನ್ನು ಹೆಚ್ಚಿಸಿಕೊಳ್ಳಲು ಸುವರ್ಣ ಅವಕಾಶವಿದೆ” ಎಂದು ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.
How to Check SSLC Result 2026:
- ಮೊದಲು ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶದ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ‘SSLC Examination-1 Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಹಾಲ್ ಟಿಕೆಟ್‌ನಲ್ಲಿರುವ ಪರೀಕ್ಷಾ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (Date of Birth) ನಮೂದಿಸಿ.
- ‘Submit’ ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಫಲಿತಾಂಶ ಪರದೆಯ ಮೇಲೆ ಮೂಡುತ್ತದೆ.
- ಭವಿಷ್ಯದ ದಾಖಲೆಗಾಗಿ ಫಲಿತಾಂಶದ ಪ್ರತಿಯನ್ನು ಪ್ರಿಂಟ್ ಅಥವಾ ಪಿಡಿಎಫ್ (PDF) ರೂಪದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಿ.
SSC Recruitment 2026: ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ