KEA Recruitment 2026: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: KSLSA ನಿಂದ ಪ್ರತಿಷ್ಠಿತ ‘ಶಾಖಾಧಿಕಾರಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಪ್ರತಿಷ್ಠಿತ ‘ಶಾಖಾಧಿಕಾರಿ’ (Section Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 19 ಹುದ್ದೆಗಳ ಪೈಕಿ 17 ಹುದ್ದೆಗಳು ಉಳಿಕೆ ಮೂಲ ವೃಂದಕ್ಕೆ (RPC) ಸೇರಿದ್ದರೆ, 2 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ (HK) ವೃಂದದಡಿ ಮೀಸಲಿಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಈ ನೇರ ನೇಮಕಾತಿ ನಡೆಯಲಿದ್ದು, ಆಸಕ್ತರು ಮೇ 15 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ.

ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KEA Recruitment 2026 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ವೇತನ ಶ್ರೇಣಿ: 69,250 ರೂ. – 1,34,200 ರೂ.
ಹುದ್ದೆಗಳ ಸಂಖ್ಯೆ: 19
ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:
ಶಾಖಾಧಿಕಾರಿ (Section Officer):
ಉಳಿಕೆ ಮೂಲ ವೃಂದ (RPC) – 17 ಹುದ್ದೆಗಳು
ಕಲ್ಯಾಣ ಕರ್ನಾಟಕ (HK) – 02 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಕಾನೂನು ಪದವಿಯನ್ನು (ಎಲ್‌ಎಲ್.ಬಿ / Degree in Law) ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 69,250 ರೂ. ನಿಂದ 1,34,200 ರೂ. ವರೆಗೆ ನಿಗದಿತ ವೇತನ ಶ್ರೇಣಿ ಲಭ್ಯವಿರುತ್ತದೆ.

KSLSA Recruitment 2026 ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಈ ಕೆಳಗಿನ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 40 ವರ್ಷಗಳು.
  • ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 43 ವರ್ಷಗಳು.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ: 45 ವರ್ಷಗಳು.
    (ಸರ್ಕಾರದ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಹೆಚ್ಚುವರಿ ಸಡಿಲಿಕೆ ಇರುತ್ತದೆ).

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ರೂ. 1,000/-
  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಹಾಗೂ PwBD: ರೂ. 500/-

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-04-2026
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-05-2026

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ RPC: ಡೌನ್‌ಲೋಡ್
ಅಧಿಸೂಚನೆ HK: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: cetonline.karnataka.gov.in/kea

ಹೈಕೋರ್ಟ್‌ ನೇಮಕಾತಿ 2026, ಅರ್ಜಿ ಆಹ್ವಾನ

SSC Recruitment 2026: ವಿವಿಧ ಹುದ್ದೆಗಳ ನೇಮಕಾತಿಗಾಗಿ SSC ಅರ್ಜಿ ಆಹ್ವಾನ

Leave a Comment