ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) ದೂರು ವಿಲೇವಾರಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ‘ಓಂಬುಡ್ಸ್ ಪರ್ಸನ್ಸ್’ (Ombudsman) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.
ರಾಜ್ಯದ 12 ಜಿಲ್ಲೆಗಳಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾವೆಲ್ಲಾ ಜಿಲ್ಲೆಗಳಲ್ಲಿ ಹುದ್ದೆ ಖಾಲಿ ಇವೆ? ಶೈಕ್ಷಣಿಕ ಅರ್ಹತೆ ಏನಿರಬೇಕು? ಅರ್ಜಿ ಸಲ್ಲಿಕೆ ಹೇಗೆ? ಮುಂತಾದ ಸಂಪೂರ್ಣ ಮಾಹಿತಿ ಇಲ್ಲಿದೆ:
RDPR Karnataka Recruitment 2026 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
- ಹುದ್ದೆಯ ಹೆಸರು: ಓಂಬುಡ್ಸ್ ಪರ್ಸನ್ಸ್
- ಉದ್ಯೋಗ ಸ್ಥಳ: ಕರ್ನಾಟಕ
ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೊಪ್ಪಳ, ಕೋಲಾರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ಅರ್ಹತೆ ಹಾಗೂ ಅನುಭವ:
- ಪದವಿ ಕಡ್ಡಾಯ: ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪದವಿ (Degree) ಪಡೆದಿರಬೇಕು.
- ಸೇವಾನುಭವ: ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ ಅಥವಾ ಮ್ಯಾನೇಜ್‌ಮೆಂಟ್ – ಈ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವಾನುಭವ ಹೊಂದಿರಬೇಕು.
- ಇತರೆ ಅರ್ಹತೆ: ಸಾರ್ವಜನಿಕರೊಂದಿಗೆ ಅಥವಾ ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಕಡ್ಡಾಯವಾಗಿರುತ್ತದೆ. ಯಾವುದೇ ಕ್ರಿಮಿನಲ್ ಹಿನ್ನೆಲೆ ಅಥವಾ ಯಾವುದೇ ರಾಜಕೀಯ ಪಕ್ಷದ / ನಿಷೇಧಿತ ಸಂಘ ಸಂಸ್ಥೆಯ ಸದಸ್ಯರಾಗಿರಬಾರದು. ತಪಾಸಣೆ ಮತ್ತು ಕ್ಷೇತ್ರ ಭೇಟಿಗಾಗಿ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಮರ್ಥರಾಗಿರಬೇಕು (ವೈದ್ಯಕೀಯ ಪ್ರಮಾಣ ಪತ್ರ ಕಡ್ಡಾಯ).
ವಯೋಮಿತಿ (Age Limit): ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ಗರಿಷ್ಠ ವಯಸ್ಸು 66 ವರ್ಷಗಳನ್ನು ಮೀರಿರಬಾರದು.
ಅರ್ಜಿ ಶುಲ್ಕದ ವಿವರ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕದ ಬಗ್ಗೆ ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖವಿಲ್ಲ.
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಹೊರಡಿಸಿದ ದಿನಾಂಕ: 25-03-2026.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-04-2026 (ಸಂಜೆ 5:30 ರೊಳಗೆ).
RDPR Recruitment 2026 ಪ್ರಮುಖ ಲಿಂಕ್‌ಗಳು:
- ಅಧಿಸೂಚನೆ: ಡೌನ್‌ಲೋಡ್
- ಅಧಿಕೃತ ವೆಬ್‌ಸೈಟ್: www.rdpr.karnataka.gov.in
- ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22342794.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ www.rdpr.karnataka.gov.in ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ (Download) ಮಾಡಿಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿಯನ್ನು, ತಮ್ಮ ವ್ಯಕ್ತಿತ್ವ ಪರಿಚಯ, ಕನಿಷ್ಠ 10 ವರ್ಷಗಳ ಸೇವಾನುಭವದ ದಾಖಲೆಗಳು, ಶೈಕ್ಷಣಿಕ ಪ್ರಮಾಣಪತ್ರ, ವಾಸಸ್ಥಳದ ರುಜುವಾತು ಹಾಗೂ ಇತರೆ ಪೂರಕ ದಾಖಲೆಗಳೊಂದಿಗೆ ಏಪ್ರಿಲ್ 24, 2026 ರ ಸಂಜೆ 5:30 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬೇಕು.
ಅರ್ಜಿ ತಲುಪಿಸಬೇಕಾದ ವಿಳಾಸ: ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ.1243, ಕೆ.ಎಸ್.ಐ.ಐ.ಡಿ.ಸಿ.ಕಟ್ಟಡ, ಐ.ಟಿ. ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು-560010.
PUC SSLC Result 2026 Date: ಪಿಯುಸಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಣೆ ದಿನಾಂಕ
NWKTC Admit Card: NWKRTC ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ, ಡೌನ್‌ಲೋಡ್ ಲಿಂಕ್ ಇಲ್ಲಿದೆ