ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು (SSC Recruitment 2026) ಅಧಿಸೂಚನೆಯನ್ನು ಪ್ರಕಟಿಸಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸಿಬ್ಬಂದಿ ಆಯ್ಕೆ ಆಯೋಗ (SSC)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 3003
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಸ್ಟೆನೋಗ್ರಾಫರ್,
ಚಾಲಕ (ಡ್ರೈವರ್)
ಹಾಗೂ ಇತರ ಹುದ್ದೆಗಳು
ಒಟ್ಟು ಹುದ್ದೆಗಳು: 3003
SSC Recruitment 2026 ಶೈಕ್ಷಣಿಕ ಅರ್ಹತೆ:
ಎಸ್‌ಎಸ್‌ಸಿ (SSC) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸಂಬಂಧಪಟ್ಟ ಹುದ್ದೆಗೆ ಅನುಗುಣವಾಗಿ ಕನಿಷ್ಠ 10ನೇ ತರಗತಿ, 12ನೇ ತರಗತಿ (ಪಿಯುಸಿ) ಅಥವಾ ಪದವಿ (Degree) ಹಾಗೂ ಅದಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿ.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ (7ನೇ ವೇತನ ಆಯೋಗ) ಅನ್ವಯ ಆಕರ್ಷಕ ವೇತನ ಶ್ರೇಣಿ ಹಾಗೂ ಭತ್ಯೆಗಳು ಲಭ್ಯವಿರುತ್ತವೆ.
ವಯೋಮಿತಿ:
ಸಿಬ್ಬಂದಿ ಆಯ್ಕೆ ಆಯೋಗದ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ: ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ರಿಂದ 15 ವರ್ಷಗಳ ವಿನಾಯಿತಿ ಇರುತ್ತದೆ).
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು: ರೂ. 100/-
ಎಸ್‌ಸಿ, ಎಸ್‌ಟಿ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ
ಪಾವತಿಸುವ ವಿಧಾನ: ಆನ್‌ಲೈನ್ ಮೂಲಕ ಮಾತ್ರ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13-04-2026
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-05-2026
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: ssc.gov.in